ಶಿರೂರು ಭೂಕುಸಿತ: ಮಳೆಯಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಶಿರೂರು ಬಳಿ ರಕ್ಷಣಾ ಕಾರ್ಯಾಚರಣೆ
ಶಿರೂರು ಬಳಿ ರಕ್ಷಣಾ ಕಾರ್ಯಾಚರಣೆ
Updated on

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ.

ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI ಮತ್ತು ಇತರ ರಕ್ಷಣಾ ಸಿಬ್ಬಂದಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಯಿದ. "ಭಾರೀ ಮಳೆಯು ಭೂಕುಸಿತಗಳನ್ನು ಉಂಟುಮಾಡುತ್ತಿದೆ ಮತ್ತು ಕಾರ್ಯಾಚರಣೆಯನ್ನು ಮುಂದುವರಿಸಲು ನಾವು ರಕ್ಷಣಾ ಸಿಬ್ಬಂದಿಯನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಕಾರ್ಯ ಮೇಲ್ವಿಚಾರಣೆ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಟ್ಟದ ಬಳಿ ಜನರು ಹೋಗದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚತುಷ್ಪಥ ಹೆದ್ದಾರಿಯಲ್ಲಿ ಸಿಲುಕಿದ ಗುಡ್ಡದ ಮಣ್ಣು ಗಂಗವಳ್ಳಿ ನದಿಗೆ ಜಾರಿದೆ. ಕೆಸರು ನದಿಗೆ ಶವಗಳನ್ನು ಸಾಗಿಸಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ. ಇದುವರೆಗೆ ನಾಲ್ಕು ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಸಂಜೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಆದರೆ, ಮಳೆಯಿಂದಾಗಿ ಕೆಲ ಗಂಟೆಗಳ ನಂತರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಬೆಳಗ್ಗೆ ಕಾರ್ಯಾಚರಣೆ ಪುನರಾರಂಭವಾದರೂ 9 ಗಂಟೆಯ ನಂತರ ಕಾರ್ಯಾಚರಣೆ ನಿಲ್ಲಿಸಲಾಯಿತು. ಮಳೆಯ ಅಬ್ಬರ ಜೋರಾಗಿದ್ದು, ಹೆದ್ದಾರಿಯಲ್ಲಿನ ಮಣ್ಣು ತೆರವು ಕಾರ್ಯವನ್ನು ಸ್ಥಗಿತಗೊಳಿಸಬೇಕಾಯಿತು. ಶಿರೂರಿನಲ್ಲಿ NH-66 ರ ಅವಶೇಷಗಳನ್ನು ತೆರವುಗೊಳಿಸುವ ಕೆಲಸವನ್ನು ಮಳೆಯಿಂದಾಗಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಶಿರೂರು ಬಳಿ ರಕ್ಷಣಾ ಕಾರ್ಯಾಚರಣೆ
ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮುಂದುವರೆದ ರಕ್ಷಣಾ ಕಾರ್ಯಾಚರಣೆ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಭಾರೀ ಮಳೆಯಿಂದಾಗಿ ಗುಡ್ಡ ಜಲಪಾತವಾಗಿ ಮಾರ್ಪಟ್ಟಿದೆ. ಗುಡ್ಡದ ಮೇಲೆ ನಿರಂತರವಾಗಿ ನೀರು ಹರಿಯುತ್ತಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಕಾರ್ಯಾಚರಣೆ ಮುಂದುವರಿಸುವುದು ಅಸಾಧ್ಯವಾಗಿದೆ. ಭೂಕುಸಿತ ಸಂಭವಿಸಿದ ಹಲವೆಡೆ ಬಿರುಕು ಬಿಟ್ಟಿವೆ. ನಾವು ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ನಾವು ಗುರುವಾರ ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಗುರುವಾರದ ವೇಳೆಗೆ ಮಳೆಯ ತೀವ್ರತೆಯ ಕಡಿಮೆಯಾಗುವ ಸಾಧ್ಯತೆಯಿದೆ. ನಾವು ಗುರುವಾರ ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಜನರು ಅವಶೇಷಗಳ ಅಡಿಯಲ್ಲಿದ್ದಾರೆ ಎಂದು ಅವರು ಹೇಳಿದರು. ದುರಂತಕ್ಕೆ ಕಾರಣವಾದ ಅವೈಜ್ಞಾನಿಕ ರಸ್ತೆ ಕಾಮಗಾರಿಯ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಹೇಳಿದರು. "ಶೋಧನೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಅವರು ಹೇಳಿದರು. ಏತನ್ಮಧ್ಯೆ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆಯ ತಂಡವು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com