
ಹಾಸನ: ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಚ್‌ಐಎಂಎಸ್) ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಡೆಂಗ್ಯೂ ಜ್ವರಕ್ಕೆ ಶುಕ್ರವಾರ ಬಲಿಯಾಗಿದ್ದಾರೆ.
ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ (22) ಹೆಚ್‌ಐಎಂಎಸ್‌ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಗುರುವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಮೃತ ಕುಶಾಲ್ ಹುಟ್ಟಿದ್ದು ಬಡ ಕುಟುಂಬದಲ್ಲಿ. ತಂದೆ ಮಂಜುನಾಥ್ ವ್ಯಾಪಾರಸ್ಥರಾಗಿದ್ದು, ತಾಯಿ ರೇಖಾ ಟೈಲರ್ ಆಗಿದ್ದಾರೆ.
ಕುಶಾಲ್‌ನ ಪೋಷಕರು ಕೂಡ ಡೆಂಗ್ಯೂ ಸೋಂಕುವಿನಿಂದ ಬಳಲುತ್ತಿದ್ದು, ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಶಾಲ್ ತಂದೆ ಮಂಜುನಾಥ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರ ತಾಯಿ ರೇಖಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹಾಸನ ಜಿಲ್ಲೆಯಲ್ಲಿ ಈ ವರೆಗೂ ಡೆಂಗ್ಯೂ ಜ್ವರಕ್ಕೆ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
Advertisement