
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಬೆಂಗಳೂರಿನಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸೊಳ್ಳೆಗಳಿಂದ ಹರಡುವ ಕಾಯಿಲೆಯ ಪರಿಣಾಮಕಾರಿ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.
ಜನರು ಡೆಂಗ್ಯೂ ಸಂಬಂಧಿತ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲು ಅಥವಾ ದೂರುಗಳನ್ನು ದಾಖಲಿಸಲು ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ -- 1800-425-8330 ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೀಸಲಾದ ನೋಡಲ್ ಅಧಿಕಾರಿಗಳು ರೋಗಿಗಳ ಉತ್ತಮ ಆರೈಕೆ, ಸಮಯಕ್ಕೆ ಸರಿಯಾಗಿ ತ್ವರಿತ ಪ್ರತಿಕ್ರಿಯೆ ಸಮಯ ಮತ್ತು ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಾತ್ರಿಪಡಿಸುತ್ತಾರೆ.
ರಾಜ್ಯದಲ್ಲಿ ಇಲ್ಲಿಯವರೆಗೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ 10,000 ಗಡಿ ದಾಟಿದೆ. ಜನವರಿ 1 ರಿಂದ ಜುಲೈ 18 ರವರೆಗೆ ವರದಿಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 11,451 ಕ್ಕೆ ಏರಿಕೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಎಂಟು ಜನರನ್ನು ಡೆಂಗ್ಯೂ ಬಲಿ ತೆಗೆದುಕೊಂಡಿದೆ.
"ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಬೆಂಗಳೂರಿನಾದ್ಯಂತ ಆರು ಆಸ್ಪತ್ರೆಗಳನ್ನು ಹೊಂದಿದ್ದು, ಡೆಂಗ್ಯೂ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಪ್ರತಿಯೊಂದಕ್ಕೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಡೆಂಗ್ಯೂ ಸಂಬಂಧಿತ ಬಳಲುತ್ತಿರುವ ರೋಗಿಗಳಿಗೆ ಹಾಸಿಗೆ ಅಥವಾ ಯಾವುದೇ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಅವರು ದೂರು ದಾಖಲಿಸಬಹುದು. ಇದು ಸಾರ್ವಜನಿಕರಿಗಾಗಿ ವಾರದ ಎಲ್ಲಾ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಕಾಯಿಲೆ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡೆಂಘಿ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆ ಖಾತ್ರಿಗಾಗಿ ಆರೋಗ್ಯ ಇಲಾಖೆಯು ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸುವಂತೆ ನಿರ್ದೇಶನ ನೀಡಿದೆ.
Advertisement