
ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಇಂದು ಶನಿವಾರ ಪರಿಶೀಲನೆ ನಡೆಸಿದ್ದಾರೆ.
ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಸಿಬ್ಬಂದಿ ಹೇಳಿದಾಗ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ಅಡಿಯಲ್ಲಿ ಬರುತ್ತದೆ. ಅವರ ಗಮನಕ್ಕೆ ತಂದು ಸರಿ ಪಡಿಸಲು ಹೇಳುತ್ತೇನೆ. ಇದೊಂದು ಬಹಳ ವರ್ಷದ ಕಟ್ಟಡವಾಗಿದ್ದರಿಂದ ಕೆಲವೊಂದು ಲೋಪದೋಷ ಆಗಿರಬಹುದು. ನಾನು ಆದಷ್ಟು ಬೇಗ ಮುಖ್ಯಮಂತ್ರಿ ಅವರಿಗೆ ವಿಚಾರ ತಿಳಿಸುತ್ತೇನೆ ಎಂದು ಹೇಳಿದರು.
Advertisement