ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಕಾಂಪ್ಲೆಕ್ಸ್‌ನಿಂದ 'ಅರ್ಥ್ ಮೂವರ್' ಕದ್ದ ಇಬ್ಬರ ಬಂಧನ

ಕೋರ್ಟ್‌ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಹಲಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅರ್ಥ್ ಮೂವರ್ ಸಾಂದರ್ಭಿಕ ಚಿತ್ರ
ಅರ್ಥ್ ಮೂವರ್ ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ನಗರದ ಸಿಟಿ ಸಿವಿಲ್‌ ಕೋರ್ಟ್‌ ಆವರಣದಿಂದ ಸೆಕ್ಯೂರಿಟಿ ಗಾರ್ಡ್ ಗೆ ವಂಚಿಸಿ ಅರ್ಥ್ ಮೂವರ್ ಕದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೋರ್ಟ್‌ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಹಲಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಗಣಿ ನಿವಾಸಿಗಳಾದ ಶಕ್ತಿವೇಲ್ (50) ಮತ್ತು ಸಚಿನ್ (45) ಬಂಧಿತ ಆರೋಪಿಗಳು. ಇವರು ಕಟ್ಟಡ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಥ್ ಮೂವರ್ ಸಾಂದರ್ಭಿಕ ಚಿತ್ರ
ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧನ, 76 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಜುಲೈ 13 ರಂದು ಮುಂಜಾನೆ 1 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಟ್ರಕ್‌ನಲ್ಲಿ ಆಗಮಿಸಿ, ಭದ್ರತಾ ಸಿಬ್ಬಂದಿಯೊಂದಿಗೆ 30 ನಿಮಿಷಗಳ ಕಾಲ ವಾಗ್ವಾದ ನಡೆಸಿದ್ದರು. ನ್ಯಾಯಾಲಯದ ಆವರಣದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿ, ಕಾಮಗಾರಿ ನಡೆಯುತ್ತಿರುವ ಬೇರೆ ಸ್ಥಳಕ್ಕೆ ಅರ್ಥ್ ಮೂವರ್ ಕೊಂಡೊಯ್ಯಬೇಕು ಎಂದು ಹೇಳಿ ಸೆಕ್ಯೂರಿಟಿ ಗಾರ್ಡ್ ಗೆ ವಂಚಿಸಿದ್ದರು. ಆರೋಪಿಗಳ ಮಾತನ್ನು ನಂಬಿದ ಭದ್ರತಾ ಸಿಬ್ಬಂದಿ ಇಬ್ಬರಿಗೂ ಹೊರಗೆ ವಾಹನ ತೆಗೆದುಕೊಂಡು ಹೋಗಲು ಅನುವು ಮಾಡಿಕೊಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ ಅರ್ಥ್ ಮೂವರು ನಾಪತ್ತೆಯಾಗಿರುವುದನ್ನು ಕಂಡು ಅದರ ಚಾಲಕ ದೂರು ನೀಡಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com