
ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ (The New Indian express newspaper) ಬೆಂಗಳೂರು ಆವೃತ್ತಿಯಲ್ಲಿ ವರದಿ ಬಂದ 2 ದಿನಗಳ ಬಳಿಕ ಬಿಬಿಎಂಪಿ (BBMP) ಸಿಬ್ಬಂದಿ ವಿಧಾನಸೌಧ ಆವರಣದಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿದೆ.
ಜುಲೈ.19 ರಂದು 'Brand Bengaluru takes a beating near the seat of power' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.
ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕಸವನ್ನು ತೆರವುಗೊಳಿಸಿ, ಬ್ಲೀಚಿಂಗ್ ಪೌಡರ್ ಹಾಕಿ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ. ಆದರೆ, ವಿಧಾನಸೌಧದ ಹುಲ್ಲುಹಾಸಿನ ಮೇಲೆ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ಕವರ್‌ಗಳು ಮತ್ತು ಇತರ ತ್ಯಾಜ್ಯಗಳು ಇನ್ನೂ ತೆರವುಗೊಂಡಿಲ್ಲದಿರುವುದು ಕಂಡು ಬಂದಿದೆ.
Advertisement