
ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕನ್ನಿಂಗ್ ಹ್ಯಾಮ್ ರಸ್ತೆ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತನನ್ನು 21 ವರ್ಷದ ಆಯುಷ್ ಅಯ್ಯಪ್ಪ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿ ನಿವಾಸಿಯಾಗಿದ್ದ ಅಯ್ಯಪ್ಪ, ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.
ಸೋಮವಾರ ರಾತ್ರಿ 10.45ರ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದ ಆಯುಷ್ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟುಹೊತ್ತಿಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Advertisement