
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸೆರೆವಾಸ ಮುಂದುವರೆಯಲಿದೆ.
ನಿನ್ನೆಯಷ್ಟೇ ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಕೋರ್ಟ್, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್ ರೇವಣ್ಣ ಈಗ ಹೈಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ.
Advertisement