
ರಾಮನಗರ: ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.
ಜುಲೈ 21ರಂದು ಅನೀಶ್ ತನ್ನ ಚಿಕ್ಕಪ್ಪನೊಂದಿಗೆ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳಲ್ಲಿ ಒಬ್ಬ ತನ್ನ ಜೊತೆಯಲ್ಲಿದ್ದವರ ಜೊತೆ ಅನೀಶ್‌ನ ಜಾತಿಯ ಬಗ್ಗೆ ಮಾತನಾಡಿದ್ದಾನೆ. ಇದು ಅನೀಶ್ ಮತ್ತು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು.
ನಂತರ ಗುಂಪು ಕಟ್ಟಿಕೊಂಡು ಆರೋಪಿಗಳು ಅನೀಶ್ ಮನೆಗೆ ನುಗ್ಗಿ ಜಾತಿ ನಿಂದನೆ ಮಾಡಿ ಕುಟುಂಬಸ್ಥರನ್ನು ನಿಂದಿಸಿದ್ದಲ್ಲದೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎಂದು ಬೆಂಗಳೂರು ಮಿರರ್ ವರದಿ ಮಾಡಿದೆ.
ಸದ್ಯ ಅನೀಶ್ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡ ಕುಟುಂಬದ ಇತರ ಸದಸ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.
Advertisement