ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ.
ವಿಧಾನಸಭೆ ಅಧಿವೇಶನ
ವಿಧಾನಸಭೆ ಅಧಿವೇಶನ
Updated on

ಬೆಂಗಳೂರು: ಕರ್ನಾಟಕ ವಿಧಾನಸಭೆಯು ಮುಂಬರುವ "ಒಂದು ರಾಷ್ಟ್ರ, ಒಂದು ಚುನಾವಣೆ" ಪ್ರಸ್ತಾವನೆ ಮತ್ತು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ವಿರುದ್ಧ ನಿರ್ಣಯಗಳನ್ನು ಗುರುವಾರ ಅಂಗೀಕರಿಸಿದೆ.

2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ. ಜನಸಂಖ್ಯೆಯ ಆಧಾರದ ಮೇಲೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳಬೇಕು.

ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ”.

ವಿಧಾನಸಭೆ ಅಧಿವೇಶನ
ಕೇಂದ್ರದ NEET ಪರೀಕ್ಷೆ ರದ್ಧುಗೊಳಿಸುವ ನಿರ್ಣಯಕ್ಕೆ ಉಭಯ ಸದನಗಳಲ್ಲೂ ಅಂಗೀಕಾರ

ಎರಡನೇ ನಿರ್ಣಯದಲ್ಲಿ, ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ.

ಬೇರೆ ಬೇರೆ ರಾಜ್ಯಗಳ ವಿಧಾನಸಭೆಗಳು ಅವುಗಳದ್ದೇ ಆದ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ. ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು. ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು, ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ.

ಹಾಗಾಗಿ ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ನಿರ್ಣಯವನ್ನು ಓದಿದರು. ನಂತರ ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪ್ರಕಟಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com