ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ.
ಎಂಬಿ ಪಾಟೀಲ್
ಎಂಬಿ ಪಾಟೀಲ್
Updated on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಬುಧವಾರ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಾಟಿ ಉಪಸ್ಥಿತರಿದ್ದರು.

ಎಂಬಿ ಪಾಟೀಲ್
ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಎಂಬಿ ಪಾಟೀಲ್

ಸಭೆ ಬಳಿಕ ಮಾತನಾಡಿದ ಸಚಿವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಇತ್ಯಾದಿ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ವಿವರ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com