ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದರು.
ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದರು.
Updated on: 

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಒಪ್ಪಿಗೆ ನೀಡಲಾಗಿತ್ತು.

ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ‌ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದರು.
ಪತಿ ನಿವೃತ್ತಿ, ಪತ್ನಿಗೆ ಅದೇ ಹುದ್ದೆ: ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕಕ್ಕೆ ಸಂಪುಟ ಸಭೆ ಅಸ್ತು

ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್‌ ಅವರ ಹೆಸರುಗಳು ಕೇಳಿಬಂದಿದ್ದವು. ಆದರೆ ಇಬ್ಬರ ಪೈಕಿ ಶಾಲಿನಿ ರಜನೀಶ್‌ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

ಸರ್ಕಾರಿ ಆದೇಶ
ಸರ್ಕಾರಿ ಆದೇಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com