ಧರೆಗುರುಳಿದ ಬೃಹತ್ ಮರ
ರಾಜ್ಯ
Video: ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಧರೆಗುರುಳಿದ ಬೃಹತ್ ಮರ, ಎರಡು ಕಾರು ಜಖಂ
ಇಂದು ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿ ಅತ್ಯಂತ ಸಾಮಾನ್ಯ ಗಾಳಿಗೆ ಮರ ಉರುಳಿ ಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ.
ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಅಥವಾ ಗಾಳಿ ಯಾವುದು ಇಲ್ಲದಿದ್ದರೂ ಶನಿವಾರ ಕ್ವೀನ್ಸ್ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.
ಇಂದು ಮಧ್ಯಾಹ್ನ ಕ್ವೀನ್ಸ್ ರಸ್ತೆಯಲ್ಲಿ ಅತ್ಯಂತ ಸಾಮಾನ್ಯ ಗಾಳಿಗೆ ಮರ ಉರುಳಿ ಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಮರ ಬಿದ್ದ ಸಮಯದಲ್ಲಿ ಸಾರ್ವಜನಿಕರು ಯಾರು ಅಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣ ಹಾನಿ ಅಥವಾ ಯಾರಿಗೂ ಗಾಯಗಳಾಗಿಲ್ಲ.
ಈ ಘಟನೆಯಲ್ಲಿ ಬಿಬಿಎಂಪಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಮರಗಳು ಉರುಳಿ ಬೀಳುವ ಹಂತದಲ್ಲಿದ್ದರೂ ಕೂಡ ಮುನ್ನೆಚ್ಚರಿಕೆ ತೆಗೆದುಕೊಳ್ಳದೇ, ಅವುಗಳನ್ನು ತೆರುವು ಮಾಡದ ಈ ಅನಾಹುತಕ್ಕೆ ಬಿಬಿಎಂಪಿ ಕಾರಣವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ