ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನ ನಿಗಾ ಕಡ್ಡಾಯ: ರಾಜ್ಯ ಸರ್ಕಾರ

ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ.
ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಪಾಲ್ಗೊಂಡ ಸಚಿವರು.
ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಪಾಲ್ಗೊಂಡ ಸಚಿವರು.
Updated on

ಬೆಂಗಳೂರು: ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ಬೆಂಗಳೂರಿನ ಯಲಹಂಕದದಲ್ಲಿ ಶುಕ್ರವಾರ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದು ಹೇಳಿದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಪಾಲ್ಗೊಂಡ ಸಚಿವರು.
ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌; ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ!

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

10 ಜಿಲ್ಲೆಗಳ ಡೆಂಗ್ಯೂ ಹಾಟ್ ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾ‌ಟ್‌ಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಘೀ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ ಎಂದು ತಿಳಿಸಿದರು.

ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ ಎಂದು ತಿಳಿಸಿದರು.

ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ. ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಫಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com