
ಬೆಂಗಳೂರು: ನಗರದ ಹಾಸ್ಟೆಲ್‌ನಲ್ಲಿ 24 ವರ್ಷದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 41ನೇ ಎಸಿಎಂಎಂ ಕೋರ್ಟ್ ಶನಿವಾರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮಧ್ಯಪ್ರದೇಶದಲ್ಲಿ ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದ ಬೆಂಗಳೂರು ಪೊಲೀಸರು, ಇಂದು ಮಧ್ಯಾಹ್ನ 41ನೇ ACMM ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು 10 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಇದಕ್ಕೂ ಮುನ್ನ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಡಿಸಿಪಿ(ಆಗ್ನೇಯ) ಸಾರಾ ಫಾತಿಮಾ ಅವರು ತಿಳಿಸಿದ್ದರು.
ಹತ್ಯೆಗೀಡಾದ ಯುವತಿ ಕೃತಿ ಕುಮಾರಿ, ಮೂಲತಃ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನ ಕೋರಮಂಗಲದ ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸಿಸುತ್ತಿದ್ದರು. ಆರೋಪಿ ಅಭಿಷೇಕ್ ಮೊನ್ನೆ ಮಂಗಳವಾರ ರಾತ್ರಿ, ಚಾಕು ಹಿಡಿದುಕೊಂಡು ಬಂದು ರಾತ್ರಿ 11 ಗಂಟೆಯ ಸುಮಾರಿಗೆ ಹಾಸ್ಟೆಲ್ ಗೆ ನುಗ್ಗಿ ಯುವತಿಯ ಕತ್ತು ಸೀಳಿ ಪರಾರಿಯಾಗಿದ್ದನು.
Advertisement