ಸಿ.ಪಿ.ಯೋಗೇಶ್ವರ್ ತಂದೆ ಪುಟ್ಟ ಮಾದೇಗೌಡ
ರಾಜ್ಯ
CP Yogeeshwar ಗೆ ಪಿತೃವಿಯೋಗ: ತಂದೆ ಪುಟ್ಟ ಮಾದೇಗೌಡ ನಿಧನ
ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89 ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು.
ನಿವೃತ್ತ ಶಿಕ್ಷಕರಾಗಿರುವ ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತ ಪುಟ್ಟಮಾದೇಗೌಡ ಅವರು ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪುಟ್ಟಮಾದೇಗೌಡ ಅವರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ