
ಬೆಂಗಳೂರು: ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಭಾರಿ ಮಳೆಯ ಪರಿಣಾಮ ರಸ್ತೆಗಳು ಹಾನಿಗೊಳಗಾಗಿದ್ದು, ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಕಚೇರಿ ಮಾಹಿತಿ ಪ್ರಕಟಿಸಿದ್ದು, ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಸೌಕರ್ಯ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದೆ.
ವೇಳಾಪಟ್ಟಿ ಇಂತಿದೆ
ಬೆಳಗಾವಿ-ಮೀರಜ್ ರೈಲು: ಪ್ರತಿದಿನ ಬೆಳಿಗ್ಗೆ 6.10 ಕ್ಕೆ ಹೊರಟು 9.10 ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50 ಕ್ಕೆ ಮೀರಜ್'ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ತಲುಪಲಿದೆ.
ಮಧ್ಯಾಹ್ನ 1.30 ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30 ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.35 ಕ್ಕೆ ಮೀರಜ್'ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ತಲುಪಲಿದೆ.
ಜುಲೈ 31 ರಿಂದ ಆಗಸ್ಟ್ 04ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸದುಪಯೋಗ ಪಡೆಸಿಕೊಳ್ಳಬೇಕೆಂದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
Advertisement