
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.
ಇದರ ವಿಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಇದೂವರೆಗೆ ಆರೋಪ ಸಾಬೀತಾಗಿಲ್ಲ. ಸಾಕ್ಷ್ಯಾಧಾರಗಳು ಲಭಿಸಿಲ್ಲ. ರಾಹುಲ್ ಗಾಂಧಿ ಹೇಳಿರುವಂತೆ ಯಾವುದೇ ಮಹಿಳೆಯರೂ ದೂರು ನೀಡಿಲ್ಲ. ಆದರೂ ರಾಹುಲ್ ಗಾಂಧಿಯವರು ಸಾರ್ವಜನಿಕ ಭಾಷಣದಲ್ಲಿ ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ನಿಂದಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಹುಲ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
Advertisement