ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
Published on

ಮಡಿಕೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಸಂಗ್ರಹ ಚಿತ್ರ
ರಾಜ್ಯದಲ್ಲಿ ಮಳೆ ಅವಾಂತರಕ್ಕೆ 21 ಮಂದಿ ಬಲಿ, 47ಕ್ಕೂ ಹೆಚ್ಚು ಜಾನುವಾರು ಸಾವು: ರಾಜ್ಯ ಸರ್ಕಾರ

ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ (CESC) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ವಿದ್ಯುತ್ ತಂತಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com