ವಿಜಯನಗರ: ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.
ಮುಳುಗಿರುವ ಪುರಂದರ ಮಂಟಪ
ಮುಳುಗಿರುವ ಪುರಂದರ ಮಂಟಪ
Updated on

ಹೊಸಪೇಟೆ: ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ.

ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.

ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಹನುಮ ದೇವಸ್ಥಾನ ಸೇರಿದಂತೆ 12 ಸ್ಮಾರಕಗಳು ಮುಳುಗಡೆಯಾಗಿವೆ.

ಮುಳುಗಿರುವ ಪುರಂದರ ಮಂಟಪ
ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಭಾರಿ ಮಳೆಯಾದಾಗ ಅಣೆಕಟ್ಟಿನಿಂದ ನೀರು ಹೊರಬಿಡಲಾಗುತ್ತದೆ. ಇದರಿಂದಾಗಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. “ಮುನ್ನೆಚ್ಚರಿಕೆ ಕ್ರಮವಾಗಿ, ನಾನು ಪ್ರವಾಹಕ್ಕೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿದ್ದೇನೆ ಮತ್ತು ಜನರು ಪ್ರವೇಶಿಸುವುದನ್ನು ತಡೆಯಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ 4-5 ದಿನಗಳಿಂದ ಜಲಾವೃತಗೊಂಡ ಸ್ಮಾರಕಗಳ ದರ್ಶನಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಿಲ್ಲ. ಪ್ರವಾಸಿಗರು ಸೂಚನೆಗಳನ್ನು ಪಾಲಿಸದಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com