MUDA ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಒಪ್ಪಿಗೆ ನೀಡಲು ತಜ್ಞರ ಅಭಿಪ್ರಾಯ ಪಡೆದ ಗವರ್ನರ್!

ಮುಡಾ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಗ್ರಾಪಂ/ಭ್ರಷ್ಟಾಚಾರ ನಿಗ್ರಹ ಮತ್ತು ಪರಿಸರ ವೇದಿಕೆ ಅಧ್ಯಕ್ಷರಾದ ಅಬ್ರಹಾಂ ಟಿ.ಜೆ. ಜುಲೈ 26 ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್
ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್
Updated on

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡುವ ಕುರಿತು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ತಜ್ಞರ ಕಾನೂನು ಅಭಿಪ್ರಾಯವನ್ನು ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಡಾ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಗ್ರಾಪಂ/ಭ್ರಷ್ಟಾಚಾರ ನಿಗ್ರಹ ಮತ್ತು ಪರಿಸರ ವೇದಿಕೆ ಅಧ್ಯಕ್ಷರಾದ ಅಬ್ರಹಾಂ ಟಿ.ಜೆ. ಜುಲೈ 26 ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿಗಳ ತನಿಖೆ ನಡೆದಿರುವ ಬಗ್ಗೆ ಕಾನೂನು ತಜ್ಞರು ಉಲ್ಲೇಖ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ತೀರ್ಪನ್ನು ಕಾನೂನು ತಜ್ಞರು ಕೂಡ ಒಂದು ಪ್ರಕರಣವೆಂದು ಉಲ್ಲೇಖಿಸಿದ್ದಾರೆ.

ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್
ಮುಡಾ ಹಗರಣ ಬಳಿಕ ಸಿಎಂ ಸಿದ್ದರಾಮಯ್ಯ ಏಕಾಂಗಿ: ಹೆಚ್.ವಿಶ್ವನಾಥ್

ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದರೆ ಏನು ಮಾಡಬಹುದೆಂಬ ಮುಂದಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಜ್ಞರು ಮತ್ತು ಸುಪ್ರೀಂ ಕೋರ್ಟ್ ಸಲಹೆಗಾರರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರು ಯಾವುದೇ ನಿರ್ಧಾರ ಕೈಗೊಂಡರೆ ತನಿಖೆಗೆ ಒಪ್ಪಿಗೆ ನೀಡುವುದನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಲು ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಕರೆಯುವ ಸಾಧ್ಯತೆಯಿದೆ. ಕಾನೂನು ತಜ್ಞರ ತಂಡವು ರಾಜ್ಯಪಾಲರ ಮಧ್ಯಸ್ಥಿಕೆಗಳ ನಿದರ್ಶನಗಳನ್ನು ಮತ್ತು ಸಂಭವನೀಯ ಪರಿಸ್ಥಿತಿಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ಪರಿಶೀಲಿಸುತ್ತಿದೆ.

ಮುಡಾ ಭೂ ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ರಾಜ್ಯಪಾಲರ ಕಚೇರಿ ಸ್ವೀಕರಿಸಿದೆ. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳಿದ್ದಾರೆ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧೀನದಲ್ಲಿರುವ ಅಧಿಕಾರಿಗಳು ಮತ್ತು ಸಂಸ್ಥೆಗಳು ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಟಿ.ಜೆ. ಅಬ್ರಹಾಂ ವಾದಿಸಿದರು.

ಅಬ್ರಹಾಂ ಅವರು ಭಾರತೀಯ ನ್ಯಾಯ ಸಂಹಿತೆ, 2023 ರ ಸೆಕ್ಷನ್ 218 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 17 ಎ ಮತ್ತು 19 ರ ಅಡಿಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಮಾಡಲು ಅನುಮತಿ ಕೋರಿದ್ದಾರೆ.

ಬಿ.ಎಸ್. ಯಡಿಯೂರಪ್ಪಸಿಎಂ ಆಗಿದ್ದ ಅಧಿಕಾರಾವಧಿಯಲ್ಲಿ , ಡಿ-ನೋಟಿಫಿಕೇಶನ್ ಪ್ರಕರಣದಲ್ಲಿ ಅಂದಿನ ರಾಜ್ಯಪಾಲ ದಿವಂಗತ ಹಂಸರಾಜ್ ಭಾರದ್ವಾಜ್ ಅವರು ಪ್ರಾಸಿಕ್ಯೂಷನ್ ಸಮ್ಮತಿಯನ್ನು ನೀಡಿದ್ದರು, ಅದರ ನಂತರ ಎಫ್‌ಐಆರ್ ದಾಖಲಿಸಲಾಯಿತು ಮತ್ತು ಬಿಜೆಪಿಯ ಹಿರಿಯ ನಾಯಕ ಯಡಿಯೂಪ್ಪವಿಚಾರಣೆಯನ್ನು ಎದುರಿಸಿ 2011 ರಲ್ಲಿ ಜೈಲು ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com