ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್ ತಿಮ್ಮಯ್ಯ ವಜಾ!

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಡಾ. ಶಾಂತ್ ತಿಮ್ಮಯ್ಯ
ಡಾ. ಶಾಂತ್ ತಿಮ್ಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತ್ ತಿಮ್ಮಯ್ಯ ಅವರ ಮೇಲಿತ್ತು. ಶುಕ್ರವಾರ ಈ ಸಂಬಂಧ ಅರಣ್ಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ಅಧಿಸೂಚನೆ ಹೊರಡಿಸಿದೆ.ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಂತ್ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿತ್ತು, ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕೆಎಸ್‍ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರಾವಧಿ ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಡಾ. ಶಾಂತ್ ತಿಮ್ಮಯ್ಯ
ಮಾರ್ಚ್ 2023ರಿಂದ ಇಲ್ಲಿಯತನಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಾಲ್ವರು ಸದಸ್ಯ ಕಾರ್ಯದರ್ಶಿಗಳ ನೇಮಕ!

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. ಕೆಎಸ್​​ಪಿಸಿಬಿಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com