
ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ನಂಬಿಕೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ 2 ಅಂಕಿ ಸಂಖ್ಯೆ ದಾಟಲಿದೆ ಎಂದಷ್ಟೇ ಹೇಳಿರುವ ಡಿಸಿಎಂ ನಿಖರವಾದ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ್ದ ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದರು.
"ಎಕ್ಸಿಟ್ ಪೋಲ್‌ಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ನಾನು ಹೇಳಿದ್ದೇನೆ, ಇಂದು ಸಹ ನಾನು ಅದೇ ಮಾತನ್ನು ಹೇಳುತ್ತಿದ್ದೇನೆ. ಯಾರೋ ಒಬ್ಬರು ನನಗೆ ಕರೆ ಮಾಡಿ ಅವರು (ಚಾನೆಲ್‌ಗಳು) ನಾವು ಎರಡು ಅಥವಾ ಮೂರು ಅಥವಾ ನಾಲ್ಕು ಸ್ಥಾನಗಳನ್ನು ಮಾತ್ರ ಪಡೆಯುತ್ತೇವೆ ಎಂದು ತೋರಿಸುತ್ತಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡು ಅಂಕಿಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ, ಕಾದು ನೋಡಿ, ”ಎಂದು ಶಿವಕುಮಾರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
2019 ರಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು, ಕಾಂಗ್ರೆಸ್ 1, ಜೆಡಿಎಸ್ 1, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿ ಗೆದ್ದಿದ್ದರು.
Advertisement