ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ಶಾಸಕ ಎ.ಮಂಜು ವಿಚಾರಣೆ ನಡೆಸಿದ SIT

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಜೆಡಿಎಸ್ ಶಾಸಕ ಎ ಮಂಜು
ಜೆಡಿಎಸ್ ಶಾಸಕ ಎ ಮಂಜುTNIE
Updated on

ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರನ್ನು ತಮ್ಮಯ್ಯ ನೇತೃತ್ವದ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನದ ಸಿಇಎನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.

ಎಸ್‌ಐಟಿ ವಿಚಾರಣೆ ವೇಳೆ ಅರಕಲಗೂಡು ಪಟ್ಟಣದ ಮದುವೆ ಮಂಟಪದಲ್ಲಿ ಎ ಮಂಜು ಅವರಿಗೆ ಪೆನ್ ಡ್ರೈವ್ ನೀಡಿದ್ದೇನೆ ಎಂದು ಬೇಲೂರು ತಾಲೂಕಿನ ನಲ್ಕೆ ಗ್ರಾಮದ ನವೀನ್ ಗೌಡ ಎಂಬುವರು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಎ ಮಂಜು ಅವರನ್ನು ವಿಚಾರಣೆಗೆ ಕರೆದಿದ್ದರು. ಈ ವಿಚಾರವನ್ನು ನವೀನ್ ಗೌಡ ಕೂಡ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.

ಜೆಡಿಎಸ್ ಶಾಸಕ ಎ ಮಂಜು
ಪ್ರಜ್ವಲ್ ರೇವಣ್ಣಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ತಮ್ಮಯ್ಯ ಅವರು ಎ ಮಂಜು ಅವರನ್ನು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ನವೀನ್ ಗೌಡ ಮತ್ತು ಚೇತನ್ ಗೌಡ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿದ್ದು, ಎರಡು ದಿನಗಳ ಕಾಲ ವಶಕ್ಕೆ ಪಡೆದಿದೆ. ಎ ಮಂಜು ಅವರು ನವೀನ್ ಗೌಡ ಮಾಡಿದ್ದ ಆರೋಪವನ್ನು ತಳ್ಳಿಹಾಕಿದ್ದು ಈ ಬಗ್ಗೆ ಕಾನೂನು ಕ್ರಮ ಜರುಗಿಸುವುದಾಗಿ ನವೀನ ಗೌಡಗೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com