ಬೆಂಗಳೂರು: ರಾಜ್ಯದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ವಿ ಕಾಮೇಶ್ವರ್ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿತ್ತು.ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ. ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದು, ಅಧಿಕಾರ ಸ್ವೀಕರಿಸುವಂತೆ ನಿರ್ದೇಶಿಸಿದ್ದರು.
2010ರಲ್ಲಿ ನ್ಯಾ. ರಾವ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ರಾವ್ ಅವರನ್ನು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2015ರ ಮಾರ್ಚ್ 18ರಂದು ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
Advertisement