ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮೊದಲ ಹಂತದಲ್ಲಲಿ ಕಾವೇರಿ 1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 6 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕಾಮಗಾರಿ ನಡೆಸುವುದರಿಂದ 12 ಗಂಟೆ ನೀರು ಪೂರೈಕೆ ಇರುವುದಿಲ್ಲ.
ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್‌ನಲ್ಲಿ ಅದೇ ದಿನ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸಹಕರಿಸುವಂತೆ ಜನಮಂಡಳಿ ಮನವಿ ಮಾಡಿದೆ.
ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ಧತೆ ನಡೆಸಿದೆ. 110 ಗ್ರಾಮಗಳಿಗೆ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement