ಲೋಕಸಭಾ ಚುನಾವಣೆ 2024: ನಗರದ 3 ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಸಿದ್ಧತೆ

ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆಂದು ಹೇಳಿದರು.

ನಗರದಲ್ಲಿ ಮೂರು ಎಣಿಕೆ ಕೇಂದ್ರಗಳಿದ್ದು, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅಧಿಕಾರಿಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಎಣಿಕೆ ಕೇಂದ್ರಗಳಲ್ಲಿ ವಿಡಿಯೋ ಮಾಡಲಾಗುತ್ತಿದೆ. ಅಂಚೆ ಮತಗಳ ಎಣಿಕೆ ಕಾರ್ಯ ಸಮರ್ಪಕವಾಗಿ ನಡೆಯಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಂಗ್ರಹ ಚಿತ್ರ
ಲೋಕಸಭಾ ಚುನಾವಣೆ 2024: ಎಕ್ಸಿಟ್ ಪೋಲ್ ಭವಿಷ್ಯ- ಪ್ರಧಾನಿ ಮೋದಿ ಪ್ರತಿಕ್ರಿಯೆ

ಮತಎಣಿಕ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಹಾಗೂ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕಾಗಿ ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿ ನೀಡಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನೂ ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮೂರು ಎಣಿಕೆ ಕೇಂದ್ರಗಳು:

  • ಬೆಂಗಳೂರು ಸೆಂಟ್ರಲ್- ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ

  • ಬೆಂಗಳೂರು ಉತ್ತರ- ಸೇಂಟ್ ಜೋಸೆಫ್ ಕಾಲೇಜು, ವಿಟ್ಟಲ್ ಮಲ್ಯ ರಸ್ತೆ

  • ಬೆಂಗಳೂರು ದಕ್ಷಿಣ- SSMRV ಕಾಲೇಜು, 9ನೇ ಬ್ಲಾಕ್, ಜಯನಗರ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com