ಬೆಂಗಳೂರಿನಲ್ಲಿ ವರುಣನ ಆರ್ಭಟ: 133 ವರ್ಷಗಳ ದಾಖಲೆ ಮುರಿದ ಭಾನುವಾರದ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 111 ಮಿಮೀ ಮಳೆಯಾಗಿದ್ದು, ಜೂನ್‌ನಲ್ಲಿ ಒಂದೇ ದಿನದಲ್ಲಿ ಸುರಿದ ಈ ಮಳೆ 133 ವರ್ಷಗಳ ದಾಖಲೆಯನ್ನು ಮುರಿದಿದೆ.
ಬೆಂಗಳೂರಿನಲ್ಲಿ ವರುಣನ ಆರ್ಭಟ: 133 ವರ್ಷಗಳ ದಾಖಲೆ ಮುರಿದ ಭಾನುವಾರದ ಮಳೆ
NAGARAJAGADEKAL
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 111 ಮಿಮೀ ಮಳೆಯಾಗಿದ್ದು, ಜೂನ್‌ನಲ್ಲಿ ಒಂದೇ ದಿನದಲ್ಲಿ ಸುರಿದ ಈ ಮಳೆ 133 ವರ್ಷಗಳ ದಾಖಲೆಯನ್ನು ಮುರಿದಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 2 ರಂದು ಕಳೆದ 133 ವರ್ಷಗಳಲ್ಲಿ ಜೂನ್‌ನಲ್ಲಿ ಒಂದೇ ದಿನದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ(IMD)ಯ ವಿಜ್ಞಾನಿ ಎನ್ ಪುವಿಯರಸನ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಜೂನ್ 1 ಮತ್ತು ಜೂನ್ 2 ರಂದು ಎರಡು ದಿನದಲ್ಲಿ 140.7 ಮಿಮೀ ಮಳೆಯಾಗಿದೆ. ಇದು ಜೂನ್ ತಿಂಗಳ ಸರಾಸರಿಯನ್ನು ಮೀರಿಸಿದೆ ಎಂದು ಅವರು ಹೇಳಿದ್ದಾರೆ.

ಭಾನುವಾರ ಸಂಜೆಯಿಂದ ರಾತ್ರಿವರೆಗೂ ಸುರಿದ ಮಳೆಯು, 133 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. ಜೂನ್ ತಿಂಗಳಲ್ಲಿ ಒಂದೇ ದಿನದಲ್ಲಿ ಸುರಿದ ಅತ್ಯಧಿಕ ಮಳೆ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.

1891, ಜೂನ್ 16 ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರಿ ಮಳೆಯಿಂದ ಬೆಂಗಳೂರಿನ ಬಹುತೇಕ ಪ್ರತಿ ಪ್ರದೇಶದ ರಸ್ತೆಗಳಲ್ಲಿ ಬೃಹದಾಕಾರದ ಮರಗಳು ಧರೆಗುರುಳಿರುವುದನ್ನು ಗಮನಿಸಿದಾಗ, ಗಾಳಿಯ ಭಯಾನಕತೆ ಹೇಗಿತ್ತು ಎನ್ನುವುದು ಅರಿವಾಗುತ್ತದೆ.

ಬೆಂಗಳೂರಿನಲ್ಲಿ ವರುಣನ ಆರ್ಭಟ: 133 ವರ್ಷಗಳ ದಾಖಲೆ ಮುರಿದ ಭಾನುವಾರದ ಮಳೆ
Bengaluru Rains: ಬಿರುಗಾಳಿ ಸಹಿತ ಧಾರಾಕಾರ ಮಳೆ, Namma Metro ಹಳಿ ಮೇಲೆ ಮರ ಬಿದ್ದು ಸಂಚಾರ ಸ್ಥಗಿತ!

ಹಲವು ನಿವಾಸಿಗಳು ಬಿದ್ದ ಮರಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಭಾನುವಾರ ರಾತ್ರಿ ಟ್ರಿನಿಟಿ ಮೆಟ್ರೊ ನಿಲ್ದಾಣದ ಬಳಿ ಮೆಟ್ರೊ ಟ್ರ್ಯಾಕ್ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿತ್ತು.

ಬೆಂಗಳೂರಿನ ಐಎಂಡಿ ಕೇಂದ್ರದ ಮುಖ್ಯಸ್ಥ ಸಿ ಎಸ್ ಪಾಟೀಲ್ ಅವರ ಪ್ರಕಾರ, ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಮತ್ತಷ್ಟು ಚುರುಕಾಗಲಿದ್ದು, ಜೂನ್ 5 ರವರೆಗೆ ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಹಾಗೂ ಬಳ್ಳಾರಿ, ಬೆಂಗಳೂರು(ಗ್ರಾಮೀಣ ಮತ್ತು ನಗರ), ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ತುಮಕೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com