
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಅಣ್ಣ ಸಾಹೇಬ್ ಜೊಲ್ಲೆ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು ಗೆಲ್ಲಿಸಿಕೊಂಡಿದ್ದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ಸಂಭ್ರಮಾಚರಣೆ ವೇಳೆ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ.
ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಜಮೀರ್ ನಾಯಿಕವಾಡಿ ಪಾಕಿಸ್ತಾನ ಜಿಂದಾಬಾದ್, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್, ಮೋದಿ ಹಮಾರಾ ಕುತ್ತಾ ಎಂದು ಕೂಗಿದ್ದಾನೆ.
ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಆರೋಪಿ ಜಮೀರ್ ನಾಯಿಕವಾಡಿಯನ್ನು ವಶಕ್ಕೆ ಪಡೆದಿದ್ದಾರೆ.
Advertisement