
ಕೋಲಾರ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮೊದಲ ಗೆಲುವು ಲಭಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಜಯ ದಾಖಲಿಸಿದ್ದಾರೆ.
ಕೋಲಾರ ಲೋಕ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಗೌತಮ್ ವಿರುದ್ಧ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇದು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಮೊದಲ ಗೆಲುವಾಗಿದ್ದು, ಮೀಸಲು ಕ್ಷೇತ್ರವಾಗಿದ್ದ ಕೊಲಾರದಲ್ಲಿ ತೀವ್ರ ಏರ್ಪಟ್ಟಿತ್ತು. ನಾಯಕರ ನಡುವಿನ ಜಿದ್ದಿನ ಬಳಿಕ ಈ ಫಲಿತಾಂಶ ಪ್ರಕಟಗೊಂಡಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಯ 2 ನೇ ಹಂತದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಮತದಾನ ನಡೆದಿತ್ತು.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಎಸ್ .ಮುನಿಸ್ವಾಮಿ ಅವರು ಕಾಂಗ್ರೆಸ್ನ ಕೆ.ಎಚ್.ಮುನಿಯಪ್ಪ ಅವರನ್ನು 2,10,021 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.56.32ರಷ್ಟು ಮತಗಳನ್ನು ಪಡೆದಿತ್ತು.
Advertisement