ಪೆನ್ ಡ್ರೈವ್ ಪ್ರಕರಣ: ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಕೋರಿದ ಕರ್ನಾಟಕ ಹೈಕೋರ್ಟ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂದಿಸಿದಂತೆ ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂದಿಸಿದಂತೆ ಆರೋಪಿ ಶರತ್ ಪಾತ್ರದ ಬಗ್ಗೆ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ನವೀನ್ ಗೌಡ ಮತ್ತು ಇತರರ ವಿರುದ್ಧ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನ ಆಧಾರದ ಮೇಲೆ ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಶರತ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ತನಿಖಾ ದಾಖಲೆಗಳನ್ನು ಪಡೆದುಕೊಂಡು ಜೂನ್ 10 ರಂದು ತನ್ನ ಮುಂದೆ ಸಲ್ಲಿಸುವಂತೆ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಕರ್ನಾಟಕ ಹೈಕೋರ್ಟ್
ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಜಾಮೀನು!

ತಮ್ಮ ಕಕ್ಷಿದಾರರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಮಧ್ಯಂತರ ತಡೆಗೆ ತಡೆ ನೀಡಬಹುದು ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ಯಾವುದೇ ಮಧ್ಯಂತರ ಆದೇಶವನ್ನು ನೀಡುವ ಮುನ್ನ ತನಿಖಾ ದಾಖಲೆಗಳನ್ನು ನೋಡಬೇಕು ಎಂದು ನ್ಯಾಯಾಲಯವು ಹೇಳಿದೆ.

ಆರಂಭದಲ್ಲಿ ಪ್ರಜ್ವಲ್ ಅವರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ನಂತರ ಅರ್ಜಿದಾರರ ಹೆಸರನ್ನು ಅದಕ್ಕೆ ಸೇರಿಸಲಾಯಿತು. ಆದರೆ, ಅವರು ಪೆನ್ ಡ್ರೈವ್‌ಗಳನ್ನು ಹಂಚಿಕೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಅರ್ಜಿದಾರರಿಗೆ ಸಂಬಂಧಿಸಿದ ಸ್ಥಳಗಳಿಂದ ಯಾವುದೇ ದೋಷಾರೋಪಣೆ ಸಾಮಗ್ರಿಗಳನ್ನು ಅಥವಾ ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ ಎಂದು ಎಂದು ವಕೀಲರು ವಾದಿಸಿದರು.

ಕರ್ನಾಟಕ ಹೈಕೋರ್ಟ್
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ಶಾಸಕ ಎ.ಮಂಜು ವಿಚಾರಣೆ ನಡೆಸಿದ SIT

ಹೈಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ

ಈಮಧ್ಯೆ, ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಾಲಯವು ಮೇ 31 ರಂದು ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಸಂತ್ರಸ್ತೆ, ಆಕೆಯ ಸಹೋದರಿ ಮತ್ತು ಸಾಕ್ಷಿಗಳ ಹೇಳಿಕೆಗಳು ಪ್ರಕರಣದಲ್ಲಿ ಭವಾನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಅಂಶವನ್ನು ದೃಢಪಡಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com