ಮಹರ್ಷಿ ವಾಲ್ಮೀಕಿ ನಿಗಮ ಹಗರಣ ತನಿಖೆ ಅಗತ್ಯವಿದ್ದರೆ ಸಿಬಿಐ ತನಿಖೆಗೆ: ಡಾ ಜಿ ಪರಮೇಶ್ವರ್

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ (CBI) ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು.
ಡಾ ಜಿ ಪರಮೇಶ್ವರ್
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ (CBI) ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದು ಅಂತ ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.

ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ನ್ನು ಸಿಬಿಐಗೆ ನಾವೇ ಕೋಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದರು.

ಡಾ ಜಿ ಪರಮೇಶ್ವರ್
ವಾಲ್ಮೀಕಿ ನಿಗಮ ಹಗರಣ: ತೆಲಂಗಾಣ ಸಹಕಾರ ಬ್ಯಾಂಕ್‌ ಅಧ್ಯಕ್ಷನ ಬಂಧನ; ಅವ್ಯವಹಾರದಲ್ಲಿ ನೆರೆರಾಜ್ಯದ ನಂಟು ದೃಢ!

ನಿರೀಕ್ಷಿತ ಫಲಿತಾಂಶ ಬಂದಿಲ್ಲ: ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಗೆ ನಿರೀಕ್ಷಿಸಿದಷ್ಟು ಫಲಿತಾಂಶ ಸಿಕ್ಕಿಲ್ಲ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಪರಿಶ್ರಮ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಫಲಿತಾಂಶ ಏರುಪೇರು ಆಗಿದೆ ಎಂದರು.

ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com