ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅತ್ಯಾಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಾಪು ಸಿದ್ದಲಿಂಗಸ್ವಾಮಿ
ಕಾಪು ಸಿದ್ದಲಿಂಗಸ್ವಾಮಿ
Updated on: 

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.

ಕಾಪು ಸಿದ್ದಲಿಂಗಸ್ವಾಮಿ
ಉಡುಪಿ: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ದಂಪತಿ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com