
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ BJP-JDS ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅವರು 4,622 ಮತಗಳ ಅಂತರದಿಂದ ಗೆದ್ದಿದ್ದಾರೆ.
ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಕೆ. ವಿವೇಕಾನಂದ ಗೆಲುವಿನ ನಗೆ ಬೀರಿದ್ದು ಒಟ್ಟಾರೆ 7,916 ಮತಗಳನ್ನು ಗಳಿಸಿದ್ದಾರೆ. ಇನ್ನು ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲು ಕಂಡಿದ್ದು 4,658 ಮತಗಳನ್ನು ಪಡೆದಿದ್ದಾರೆ.
ಮಾಜಿ ಶಾಸಕ ವಾಟಾಳ್ ನಾಗರಾಜ್ 66, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ 17 ಮತಗಳನ್ನಷ್ಟೆ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ನಿವೃತ್ತ ಡಿಡಿಪಿಯು ನಾಗಮಲ್ಲೇಶ್ 216 ಹಾಗೂ ಹ.ರ. ಮಹೇಶ್ 338 ಮತಗಳನ್ನು ಗಳಿಸಿ ಗಮನಸೆಳೆದಿದ್ದಾರೆ. ಈವರೆಗೆ ಎಣಿಕೆಯಾದ ಮತಗಳಲ್ಲಿ 737 ಮತಗಳು ಅಸಿಂಧುವಾಗಿದೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ 5,267 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಕೆಕೆ ಮಂಜುನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತ ಪಡೆದರು.19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿವೆ.
Advertisement