ಬೆಂಗಳೂರು: ಬೈಕ್ ಗೆ ವಾಟರ್ ಟ್ಯಾಂಕರ್ ಡಿಕ್ಕಿ; ಮೊದಲ ದಿನ ಕಾಲೇಜಿಗೆ ಹೋಗುತ್ತಿದ್ದ ವೇಳೆ ಶವವಾದ ಅಕ್ಕ-ತಮ್ಮ!

ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ನಡೆದಿದೆ.
Accident
ಅಪಘಾತ
Updated on: 

ಬೆಂಗಳೂರು: ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ನಡೆದಿದೆ.

ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಮಧುಮಿತ (20), ರಂಜನ್(18) ಮೃತರು. ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗುತ್ತಿದ್ದ. ಈ ವೇಳೆ ವಾಟರ್ ಟ್ಯಾಂಕರ್ ಇಬ್ಬರನ್ನೂ ಬಲಿ ಪಡೆದಿದೆ.

ವೇಗವಾಗಿ ಬಂದ ವಾಟರ್ ಟ್ಯಾಂಕರ್ ಬೈಕ್‌ ಮಿರರ್‌ಗೆ ಡಿಕ್ಕಿಯಾಗುತ್ತಲೇ ಅಕ್ಕ-ತಮ್ಮ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಟ್ಯಾಂಕರ್ ಹಿಂಬದಿ ಚಕ್ರ‌ ಹರಿದು ದುರಂತ ಸಂಭವಿಸಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident
ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು; ಮರದಲ್ಲಿ ನೇತಾಡಿದ ಶವ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com