ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ; ತಪ್ಪಿದಲ್ಲಿ ಪರವಾನಗಿ ರದ್ದು: ಮಂಗಳೂರು ಪಾಲಿಕೆ ಆಯುಕ್ತ ಎಚ್ಚರಿಕೆ

ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ- ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು ಮಹಾನಗರ ಪಾಲಿಕೆ

ಮಂಗಳೂರು: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೋರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ
ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಮಾ.12ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ

ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿದ್ದು,ಇನ್ನು ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದ್ದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com