ಬೆಂಗಳೂರು: ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!

ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಬಿಎಂಟಿಸಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗಳಿಂದ ಅನುಮೋದನೆ ಪಡೆದಿದ್ದರೂ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಟಿಪಿ ಬರದಿರುವುದು ಕಾರಣವಾಗುತ್ತಿದೆ ಎಂದು ದೂರಿದ್ದಾರೆ. ಈ ಸಮಸ್ಯೆ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿಲ್ಲ. ಇದಕ್ಕೆ ಕಾರಣ ಶಕ್ತಿ ಯೋಜನೆಯಾಗಿದೆ.

ಯೋಜನೆಯಡಿಯಲ್ಲಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ಬಳಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

2023-24ಕ್ಕೆ ನೀಡಲಾದ ಬಸ್ ಪಾಸ್ ಮೇ 31 ರಂದು ಮುಕ್ತಾಯಗೊಂಡಿದೆ. ಕಳೆದ ವರ್ಷ, ನಾವು ಬಸ್ ಪಾಸ್ ಪಡೆಯುವವರೆಗೆ ಕಾಲೇಜು ಪ್ರವೇಶ ರಶೀದಿ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ಈ ವರ್ಷ ಆ ಆಯ್ಕೆಯನ್ನು ನೀಡದೆ ಬಸ್‌ ಪಾಸ್‌ ಪಡೆಯಬೇಕು ಅಥವಾ ಟಿಕೆಟ್‌ ಖರೀದಿಸಬೇಕು ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಗ್ರಹ ಚಿತ್ರ
ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಪ್ರಾರಂಭಿಸಿದ ಬಿಎಂಟಿಸಿ; ಅರ್ಜಿ ಸಲ್ಲಿಸುವುದು ಹೇಗೆ ತಿಳಿಯಿರಿ...

ಅರ್ಜಿ ಭರ್ತಿ ಮಾಡಿ ಕಾಲೇಜು ಆಡಳಿತ ಮಂಡಳಿಯಿಂದ ಅನುಮೋದನೆ ಪಡೆದ ನಂತರ ಅದನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಪ್ರಯತ್ನಿಸಿದೆವು. ಆದರೆ, ಸಾಧ್ಯವಾಗುತ್ತಿಲ್ಲ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು OTP ಒದಗಿಸಬೇಕಾಗಿದೆ, ಆದರೆ, ಒಟಿಪಿ ಬರುತ್ತಿಲ್ಲ. ಆನ್‌ಲೈನ್‌ನಲ್ಲಿ ಹಲವಾರು ಬಾರಿ ಪ್ರಯತ್ನಿಸಿದೆ. ಬೆಂಗಳೂರುಒನ್ ಕೇಂದ್ರಕ್ಕೂ ಭೇಟಿ ನೀಡಿದೆ. ಬಿಎಂಟಿಸಿ ಸರ್ವರ್‌ನಲ್ಲಿ ಸಮಸ್ಯೆ ಇರುವ ಕಾರಣ ಒಟಿಪಿ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಬಸ್ ಪಾಸ್ಇಲ್ಲದ ಕಾರಣ ಪ್ರತೀನಿತ್ಯ ಹಣ ನೀಡಿ ಪ್ರಯಾಣಿಸಬೇಕಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ನಾನು ಯಶವಂತಪುರದ ನಿವಾಸಿಯಾಗಿದ್ದು, ಕಾಲೇಜು ಇರುವುದು ಯಲಹಂಕದಲ್ಲಿ. ಪ್ರತೀನಿತ್ಯ ಪ್ರಯಾಣಕ್ಕೆ ಬಸ್ ಟಿಕೆಟ್‌ಗಾಗಿ ಸುಮಾರು 50 ರೂಪಾಯಿ ಖರ್ಚು ಮಾಡಬೇಕಾಗಿದೆ ಎಂದು ವಿದ್ಯಾರ್ಥಿಯೊಬ್ಬ ಅಳಲು ತೋಡಿಕೊಂಡಿದ್ದಾರೆ.

ಬಿಎಂಟಿಸಿ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಹೌದು. ಬುಧವಾರ ಅರ್ಜಿ ಸ್ವೀಕರಿಸುವಲ್ಲಿ ಸಮಸ್ಯೆಗಳು ಎದುರಾಗಿತ್ತು. ತಾಂತ್ರಿಕ ದೋಷಗಳು ಎದುರಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳಿಂದಲೂ ದೂರುಗಳು ಬಂದಿವೆ. ಆದಾಗ್ಯೂ, ಈ ಸಮಸ್ಯೆ ಬಿಎಂಟಿಸಿಯಿಂದಾಗಿಲ್ಲ. ಸೇವಾ ಸಿಂಧು ಪೋರ್ಟಲ್‌ನಿಂದಾಗಿದೆ. ಸಮಸ್ಯೆಯನ್ನು ಪರಿಹರಿಸಲಾಗಿದೆ. ಇದೀಗ ವಿದ್ಯಾರ್ಥಿಗಳು ಎಂದಿನಂತೆ ಪಾಸ್‌ಗಳಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com