ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ: ಮನೆಗಳ ಮೇಲೆ ಸೌರ ಫಲಕ ಅಳವಡಿಕೆಗೆ ರಾಜ್ಯದಿಂದ 10 ಸಾವಿರ ಮಂದಿ ಅರ್ಜಿ ಸಲ್ಲಿಕೆ!

ಕೇಂದ್ರ ಸರ್ಕಾರದ ‘ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯಡಿ ಮನೆಗಳ ಛಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಳ್ಳಲು ರಾಜ್ಯದಲ್ಲಿ 10 ಸಾವಿರ ಜನ ಆಸಕ್ತಿವಹಿಸಿ, ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕೇಂದ್ರ ಸರ್ಕಾರದ ‘ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯಡಿ ಮನೆಗಳ ಛಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಳ್ಳಲು ರಾಜ್ಯದಲ್ಲಿ 10 ಸಾವಿರ ಜನ ಆಸಕ್ತಿವಹಿಸಿ, ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕ ಇಂಧನ ಇಲಾಖೆ ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಯೋಜನೆಯನ್ನು ಜನಪ್ರಿಯಗೊಳಿಸುವ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಜಂಟಿ ಕಾರ್ಯದರ್ಶಿ ದಿನೇಶ್ ದಯಾನಂದ ಜಗದಾಳೆ ಅವರು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯೊಂದಿಗೆ ಸೌರಶಕ್ತಿಯನ್ನು ಜನಪ್ರಿಯಗೊಳಿಸುತ್ತಿದೆ. ಈ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾದ ಯೋಜನೆಗೆ ಕರ್ನಾಟಕದಿಂದ 10,000 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇಂಧನ ಇಲಾಖೆಯ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 22,000 ಸೌರ ಫಲಕಗಳನ್ನು ಸ್ಥಾಪಿಸಲಾಗಿದೆ, ಇದರಿಂದ ಸುಮಾರು 570 MW ವಿದ್ಯುತ್ ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಅಳವಡಿಸಲಾಗಿರುವ 22,000 ಪ್ಯಾನಲ್‌ಗಳಲ್ಲಿ 9,377 ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮಿತಿಯಲ್ಲಿದ್ದು, 301.7 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದು ಹೇಳಿದರು.

ರೂಫ್ ಟಾಪ್ ಸೌರ ಫಲಕಗಳನ್ನು ಅಳವಡಿಸುವ ಮಾಲೀಕರಿಗೆ ಯಾವುದೇ ಪ್ರೋತ್ಸಾಹವನ್ನು ನೀಡಲಾಗುತ್ತಿಲ್ಲ, ಆದರೆ. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಯೋಜನೆ ಜಾರಿಯಲ್ಲಿದ್ದು, ಅರ್ಜಿ ಪ್ರಕ್ರಿಯೆಯನ್ನೂ ಡಿಜಿಟಲೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ವಿವಿಧ ಷೇರುದಾರರು ಮತ್ತು ಮಾರಾಟಗಾರರು MNRE ವೆಬ್‌ಸೈಟ್‌ನಲ್ಲಿ ಎಸ್ಕಾಮ್‌ಗಳೊಂದಿಗೆ ಸುಗಮ ಸಂವಹನ ಸಾಧಿಸಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಕೇಂದ್ರ ಬಜೆಟ್ 2024-25: ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್!

ಇದಕ್ಕೆ ಪ್ರತಿಕ್ರಿಯಿಸಿದ ಜಗದಾಳೆ, ಮೂರು ತಿಂಗಳಿಂದ ಸಮಸ್ಯೆಗಳಾಗಿವೆ. ಇದನ್ನು ಸರಿಪಡಿಸಲಾಗುವುದು ಎಂದರು.

ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸರ್ಕಾರವು ಮಾರಾಟಗಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರವು 2025-26 ರವರೆಗೆ ರೂ 750 ಶತಕೋಟಿ ವೆಚ್ಚದಲ್ಲಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು 10 ಮಿಲಿಯನ್ ಭಾರತೀಯ ಕುಟುಂಬಗಳಿಗೆ ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿಯವರೆಗೆ, ದೇಶಾದ್ಯಂತ 10 ಮಿಲಿಯನ್ ಜನರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 10,000 ಮಂದಿ ಕರ್ನಾಟಕದವರಾಗಿದ್ದಾರೆಂದು ಮಾಹಿತಿ ನೀಡಿದರು.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಾತನಾಡಿ, ಈ ಯೋಜನೆಯನ್ನು ಕಾರ್ಯಗತಗೊಳಿಸಲು, 229 ಖಾಸಗಿ ಮಾರಾಟಗಾರರನ್ನು ನೋಂದಾಯಿಸಲಾಗಿದೆ. ಸರ್ಕಾರ ಯೋಜನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು, ಎಲ್ಲಾ ಮನೆಗಳಲ್ಲಿ ಸೌರಶಕ್ತಿಯ ಬಳಕೆ, ಆ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದರು

ಇದಕ್ಕೂ ಮುನ್ನ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದದ ಇಂಧನ ಸಚಿವಾಲಯದ ’ಸೂರ್ಯ ರಥ ಯಾತ್ರೆ’ಗೆ ಚಾಲನೆ ನೀಡಲಾಯಿತುಯ

ಈ ಸಂದರ್ಭದಲ್ಲಿ ಕೇಂದ್ರದ ಎಂಎನ್‌ಆರ್‌ಇ ಜಂಟಿ ಕಾರ್ಯದರ್ಶಿ ದಿನೇಶ್ ಜಗದಾಳೆ, ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಾಂತೇಶ ಬಿಳಗಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (ಕೆಆರ್‌ಇಡಿಎಲ್) ಎಂಡಿ ಕೆಪಿ ರುದ್ರಪ್ಪಯ್ಯ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಗೌರವ್ ಗುಪ್ತಾ ಅವರು, ಮನೆ ಛಾವಣಿ ಮೇಲೆ ಒಂದು ಕಿಲೋ ವಾಟ್ ಸಾಮರ್ಥ್ಯದ ವ್ಯವಸ್ಥೆಗೆ 30 ಸಾವಿರ ರೂ., ಎರಡು ಕಿ. ವಾ.ಗೆ 60 ಸಾವಿರ ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. ಮೂರು ಕಿ.ವಾ. ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ 78 ಸಾವಿರ ರೂ. ಸಬ್ಸಿಡಿ ಮಿತಿಯಿದೆ. ಸೂರಿನ ಮೇಲೆ ಸೌರ ವ್ಯವಸ್ಥೆಯನ್ನು ಗ್ರಿಡ್ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ. ಸೋಲಾರ್ ಫಲಕಕ್ಕೆ ಮನೆಗಳ ಛಾವಣಿ ಜಾಗ ಬಳಸುವ ಕಾರಣ ಹೆಚ್ಚುವರಿ ಜಾಗದ ಅವಶ್ಯಕತೆಯಿಲ್ಲ, ನಿರ್ವಹಣೆ ವೆಚ್ಚ ತೀರಾ ಕಡಿಮೆ. ಉಚಿತವಾಗಿ ವಿದ್ಯುತ್ ಲಭಿಸುತ್ತಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com