ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಶೀಘ್ರದಲ್ಲೇ ದಾಳಿ: ಲೋಕಾಯುಕ್ತರ ಹೆಸರಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ಪೊಲೀಸರ ಶೋಧ!
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಉಪಾಧೀಕ್ಷಕ ಎಂದು ಹೇಳಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ವಿಧಾನಸೌಧ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ವಿವಿ ಟವರ್‌ನ 9ನೇ ಮಹಡಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ.
ಕಾರ್ಪೊರೇಷನ್ ಜನರಲ್ ಮ್ಯಾನೇಜರ್ ಕವಿತಾ ಅವರಿಗೆ ಕರೆ ಮಾಡಿರುವ ಆರೋಪಿ ತನ್ನನ್ನು ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಎಂದು ಗುರುತಿಸಿಕೊಂಡಿದ್ದು, ಲೋಕಾಯುಕ್ತ ದಾಳಿ ನಡೆಯಲಿದ್ದು, ಜುಲೈ 3 ಮತ್ತು 4 ರಂದು ಕಚೇರಿಗೆ ಹಾಜರಾಗದಂತೆ ಎಚ್ಚರಿಕೆ ನೀಡಿದ್ದಾನೆಂದು ಹೇಳಲಾಗುತ್ತಿದೆ.
ಇದರ ಬೆನ್ನಲ್ಲೇ ಕವಿತಾ ಅವರು ಲೋಕಾಯುಕ್ತ ಕಚೇರಿಗೆ ಕರೆ ಮಾಡಿ ಪ್ರಕಾಶ್ ಎಂಬ ವ್ಯಕ್ತಿ ಇದ್ದಾರೆಯೇ ಎಂದು ಪರಿಶೀಲಿಸಿದ್ದಾರೆ. ಇಲ್ಲ ಎಂಬ ಉತ್ತರ ಬಂದ ಬಳಿಕ ಕವಿತಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೊಂದು ಹುಸಿ ಕರೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದೀಗ ತನಿಖೆ ಆರಂಂಭಿಸಿರುವ ಪೊಲೀಸರು, ವ್ಯಕ್ತಿ ನಂಬರ್ ಟ್ರ್ಯಾಕ್ ಮಾಡುತ್ತಿದ್ದಾರೆ,
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ