ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭ!

ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆರಂಭಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಆರಂಭಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶ, ಸಮಗ್ರ ಅಭಿವೃದ್ಧಿ ಯೋಜನಾ ಪ್ರದೇಶ (ಸಿಡಿಪಿ), ಶಿವರಾಮ ಕಾರಂತ ಬಡಾವಣೆ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ನಿರ್ಮಾಣಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.

ಸಂಗ್ರಹ ಚಿತ್ರ
ಇದೇ ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಬೆಂಗಳೂರಿನ ಡಾ. ಕಾರಂತ್ ಲೇಔಟ್‌ ಬಿಡಿಎ ಸೈಟ್‌ಗಳ ಹಂಚಿಕೆ!

ಖಾಸಗಿ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದುಕೊಳ್ಳಬೇಕು. ನಂತರ ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನ ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ವಿಷಯವು ಪ್ರಾಧಿಕಾರದ ಗಮನಕ್ಕೆ ಬಂದಿದ್ದು, ಆಯುಕ್ತರ ಆದೇಶದಂತೆ ಜೂನ್‌ 7ರಿಂದ ತೆರವು ಕಾರ್ಯ ಆರಂಭಿಸಲಾಗಿದೆ. ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವು ಗೊಳಿಸಲಾಗಿದೆ ಎಂದು ತಿಳಿಸಿದೆ.

‌ಅನಧಿಕೃತ ಬಡಾವಣೆ ನಿರ್ಮಾಣ, ನಿವೇಶನಗಳ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದೂ ಇದೇ ವೇಳೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com