ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ: 14 ದಿನಗಳ ಕಾಲ ನ್ಯಾಯಾಂಗ ಬಂಧನ
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯವು ಮೇ 31 ರಂದು ಪ್ರಜ್ವಲ್ ರನ್ನು ಜೂನ್ 6 ರವರೆಗೆ ಎಸ್‌ಐಟಿ ವಶಕ್ಕೆ ನೀಡಿತು ಮತ್ತು ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ