Elephant Death: ವಿದ್ಯುತ್ ತಗುಲಿ ದಸರಾ ಆನೆ ಅಶ್ವತ್ಥಾಮ ಸಾವು

ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಆಘಾತದ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
Mysuru Dasara elephant ashwathama
ದಸರಾ ಆನೆ ಅಶ್ವತ್ಥಾಮ
Updated on

ಮೈಸೂರು: ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಆಘಾತದ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ 'ಅಶ್ವತ್ಥಾಮ' ಆನೆಯು ಮೈಸೂರಿನಲ್ಲಿ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ.

ಅರಣ್ಯ ಇಲಾಖೆ ಮೂಲಗಳ ಪ್ರಕಾರ ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ‌ ಹೇಳಲಾಗಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಈ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌ 2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಆದರೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.

ಇತ್ತೀಚೆಗಷ್ಟೇ ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿತ್ತು. ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದ್ದು, ಇಡೀ ಕರುನಾಡೇ ಮಮ್ಮಲ ಮರುಗಿತ್ತು. ಈ ಕರಾಳ ನೆನಪು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ದಸರಾ ಆನೆ ದುರಂತ ಅಂತ್ಯ ಕಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com