
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಚ್ .ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸರ್ಕಾರದ ಬಗ್ಗೆ ಆಲೋಚನೆಗಳನ್ನು ಹಂಚಿಕೊಳ್ಳಲು ನನಗೆ ಕರೆ ಮಾಡಿದರು.
ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ವಿಶ್ವಾಸ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಕೀರ್ತಿಗೆ ಕೊಂಡೊಯ್ಯಲಿ ಎಂದು ಗೌಡ ಟ್ವೀಟ್ ಮಾಡಿದ್ದಾರೆ.
Advertisement