ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೂನ್ 18ರವರೆಗೆ ಎಸ್‌ಐಟಿ ವಶಕ್ಕೆ

ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಜೂನ್ 18ರವರೆಗೆ ಎಸ್ಐಟಿ ವಶಕ್ಕೆ ನೀಡಿದೆ.
Obscene video case: Prajwal Revanna to be produced before Special Court today
ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಜೂನ್ 18ರವರೆಗೆ ಮತ್ತೆ ವಿಶೇಷ ತನಿಖಾ ತಂಡದ(ಎಸ್‌ಐಟಿ) ಕಸ್ಟಡಿಗೆ ಒಪ್ಪಿಸಿ ಬುಧವಾರ ಆದೇಶಿಸಿದೆ.

ನ್ಯಾಯಾಲಯವು ಜೂನ್ 10 ರಂದು ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದರೆ ಸೈಬರ್ ಕ್ರೈಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಂದು ಅವರ ವಿರುದ್ಧ ಬಾಡಿ ವಾರೆಂಟ್ ಕೋರಿ ಅರ್ಜಿ ಸಲ್ಲಿಸಿತ್ತು.

ವಿಚಾಣೆ ನಡೆಸಿದ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಎಸ್‌ಐಟಿ ಮನವಿಯನ್ನು ಪುರಸ್ಕರಿಸಿದೆ. ಇದರೊಂದಿಗೆ ಎಸ್‌ಐಟಿ ಮಂಗಳವಾರದವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ.

Obscene video case: Prajwal Revanna to be produced before Special Court today
ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ವಿಚಾರಣಾಧೀನ ಕೈದಿ ನಂಬರ್ 5664!

ಮೇ 31 ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ ನಂತರ ನ್ಯಾಯಾಲಯವು ಜೂನ್ 6 ರವರೆಗೆ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿತ್ತು. ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತು.

ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದ ಪ್ರಜ್ವಲ್ ರೇವಣ್ಣ ಮೇ 31 ರಂದು ಜರ್ಮನಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com