
ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, 'ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ' ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದರು. ಜಯೇಶ್ ಪೂಜಾರಿ ಈ ಹಿಂದೆ ಜೈಲಿನಲ್ಲಿ ಇದ್ದುಕೊಂಡೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆ ಹಾಕಿದ್ದ.'ತಾನು ದಾವೂದ್ ಇಬ್ರಾಹಿಂ ತಂಡದಲ್ಲಿದ್ದೇನೆ' ಎಂದೂ ಹೇಳಿಕೊಂಡಿದ್ದ.
ಕೈದಿಯನ್ನು ಬಳಿಕ ಪೊಲೀಸರು ಸ್ಥಳೀಯ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೈಲಿನಿಂದ ಜೀವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆಗೆ ಕರೆತಂದಿದ್ದರು. ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಅಲೋಕ್ ಕುಮಾರ್ ಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
Advertisement