
ಬೆಂಗಳೂರು: ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್ ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪೊಲೀಸರ ದಾಳಿ ವೇಳೆ ನಟಿ ಹೇಮಾ ಬಳಿ ಯಾವುದೇ ಮಾದಕ ವಸ್ತು ಸಿಕ್ಕಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಜಾಮೀನು ಸಿಕ್ಕಿದ್ದರೂ ನಟಿಗೆ ಇಂದು ಬಿಡುಗಡೆ ಭಾಗ್ಯವಿಲ್ಲ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾರನ್ನು ಜೂನ್ 3ರಂದು ಬಂಧಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದ ಅಧಿಕಾರಿಗಳು ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು JMFC ನ್ಯಾಯಾಧೀಶೆ ಸಲ್ಮಾ ಅವರ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು ನಟಿಗೆ ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.
Advertisement