ಪೋಕ್ಸೋ ಕೇಸ್: ಯಡಿಯೂರಪ್ಪ ಬಂಧನ ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಕೆ

ಯಡಿಯೂರಪ್ಪ ನಿವಾಸದ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಅಥವಾ ಪೋಕ್ಸೋ ಕಾಯ್ದೆಯ ಸೆಕ್ಷನ್ 41 ಎಅಡಿಯಲ್ಲಿ ಬಿಜೆಪಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ದೂರುದಾರರು ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಿರುದ್ಧ ಲೋಕಸಭಾ ಚುನಾವಣೆಗೂ ಮುನ್ನಾ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕೆಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಕೇಸ್ ದಾಖಲಿಸಿ ಹಲವು ತಿಂಗಳು ಕಳೆದಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಿಸಿದ್ದರು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಅವರು ದೂರಿದ್ದ ಸಂತ್ರಸ್ತೆಯ ಮೇ 26 ರಂದು ಮೃತಪಟ್ಟಿದ್ದರು.

ಯಡಿಯೂರಪ್ಪ
ಪೋಕ್ಸೊ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಿಐಡಿ ನೋಟಿಸ್

ಯಡಿಯೂರಪ್ಪ ನಿವಾಸದ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಅಥವಾ ಪೋಕ್ಸೋ ಕಾಯ್ದೆಯ ಸೆಕ್ಷನ್ 41 ಎಅಡಿಯಲ್ಲಿ ಬಿಜೆಪಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ದೂರುದಾರರು ಹೇಳಿದ್ದಾರೆ. ಈ ಹಿಂದೆ ಯಡಿಯೂರಪ್ಪ ಕೂಡ ತಮ್ಮ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾವು ಯಾವುದೇ ಕಾನೂನು ಬಾಹಿರ ಕೃತ್ಯವೆಸಗಿಲ್ಲ, ದೂರುದಾರರಿಗೆ ದೂರು ನೀಡುವ ಅಭ್ಯಾಸವಿದೆ ಎಂದು ಅರ್ಜಿಯಲ್ಲಿ ಹೇಳಿದ್ದರು.

ಎಫ್‌ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಧ್ವನಿ ಮಾದರಿಗಳನ್ನು ಸಂಗ್ರಹಿಸಿದ್ದರು ಆದರೆ ನನ್ನ ಹೇಳಿಕೆಯನ್ನು ದಾಖಲಿಸಿಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಮಾರ್ಚ್‌ನಲ್ಲಿ ಸಂತ್ರಸ್ತೆಯ ತಾಯಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿದಂತೆ 53 ಜನರ ವಿರುದ್ಧ ದೂರು ದಾಖಲಿಸಿದ್ದರು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತನಿಖೆ ಮುಂದುವರಿದಿದ್ದು, ಪೊಲೀಸರು ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಬುಧವಾರ ಹೇಳಿದ್ದಾರೆ. ಈ ಹಿಂದೆ, ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಯ (ಸಿಐಡಿ) ವಿಶೇಷ ವಿಭಾಗಕ್ಕೆ ರಾಜ್ಯ ಸರ್ಕಾರ ಹಸ್ತಾಂತರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com