HSRP ನಂಬರ್ ಪ್ಲೇಟ್ ಅಳವಡಿಕೆ; ಗಡುವು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿಸಲಾದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ​​ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲ್‌ಗೋಳ್ ಅವರು ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರ ವಿಭಾಗೀಯ ಪೀಠದ ಮುಂದೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಿಸುವ ಕುರಿತು ಮನವಿ ಸಲ್ಲಿಸಿದರು.

ಹಿಂದಿನ ಆದೇಶದಿಂದಾಗಿ ರಾಜ್ಯ ಸರ್ಕಾರವು ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ವಿಸ್ತರಿಸುವ ಸ್ಥಿತಿಯಲ್ಲಿಲ್ಲ. ಜೂನ್ 12 ರವರೆಗೆ ಯಾವುದೇ ಪೂರ್ವಾಪೇಕ್ಷಿತ ಕ್ರಮಗಳನ್ನು ತೆಗೆದುಕೊಳ್ಳದಂತೆ ನಿರ್ಬಂಧಿಸುತ್ತದೆ. ಆದ್ದರಿಂದ, ನ್ಯಾಯಾಲಯವು ಹಿಂದಿನ ಆದೇಶವನ್ನು ಮಾರ್ಪಡಿಸಬೇಕು ಎಂದು ಹುಯಿಲಗೋಳ್ ತಿಳಿಸಿದರು.

ಕರ್ನಾಟಕ ಹೈಕೋರ್ಟ್
ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡವು ಜೂ. 12 ವರೆಗೆ ವಿಸ್ತರಣೆ; ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಸರ್ಕಾರದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಮೇ 21 ರಂದು ನೀಡಲಾದ ಮಧ್ಯಂತರ ಆದೇಶವನ್ನು ಮಾರ್ಪಡಿಸುವ ಮೂಲಕ ಗಡುವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಾತಂತ್ರ್ಯವನ್ನು ನೀಡಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com