ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳನ್ನು ಬಂದ್ ಮಾಡಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ರಾಜ್ಯದ ಸುಮಾರು ನರ್ಸಿಂಗ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ ತಪಾಸಣೆ ನಡೆಸಿ ಅಂತಹ ಕಾಲೇಜುಗಳಿಗೆ ಬೀಗ ಜಡಿಯಿರಿ ಎಂದು ಸ್ಥಳದಲ್ಲಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿದೇರ್ಶಕಿ ಡಾ.ಸುಜಾತ ರಾಥೋಡ್ ಅವರಿಗೆ ನಿದೇರ್ಶನ ನೀಡಿದರು.
ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಸರ್ಕಾರದಿಂದ ಎಲ್ಲಾ ಸವಲತ್ತು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿರುವ ರಾಜ್ಯದ ನರ್ಸಿಂಗ್ ಕಾಲೇಜುಗಳನ್ನು ತಪಾಸಣೆ ನಡೆಸಿ ಬೀಗ ಜಡಿಯಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ನರ್ಸಿಂಗ್ ಕಾಲೇಜುಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸುಮಾರು ನರ್ಸಿಂಗ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ ತಪಾಸಣೆ ನಡೆಸಿ ಅಂತಹ ಕಾಲೇಜುಗಳಿಗೆ ಬೀಗ ಜಡಿಯಿರಿ ಎಂದು ಸ್ಥಳದಲ್ಲಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿದೇರ್ಶಕಿ ಡಾ.ಸುಜಾತ ರಾಥೋಡ್ ಅವರಿಗೆ ನಿದೇರ್ಶನ ನೀಡಿದರು.

ಕೆಲ ಕಾಲೇಜುಗಳನ್ನು ಹೊರತುಪಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಬೋಧಕ, ಬೋಧಕೇತರ, ಪ್ರಯೋಗಾಲಯ, ಸಿಬ್ಬಂದಿ, ಗ್ರಂಥಾಲಯ, ಶುಚಿತ್ವ, ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ. ಇಷ್ಟು ಸಮಸ್ಯೆಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಯಾವ ಶಿಕ್ಷಣ ಕೊಡುತ್ತಾರೆ ಎಂದು ಸಚಿವರು ತರಾಟೆಗೆ ತೆಗೆದುಕೊಂಡರು. ಇನ್ನು ಮುಂದೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪ್ರವೇಶ‌ ಮಾಡಿಕೊಳ್ಳುವ ಮುನ್ನ ಅಧಿಕಾರಿಗಳು ಪ್ರತಿಯೊಂದು ಕಾಲೇಜುಗೆ ಭೇಟಿ ನೀಡಬೇಕು. ಯಾವ ಕಾಲೇಜು ಸರ್ಕಾರದ ಮಾನದಂಡ ಪಾಲನೆ ಮಾಡಿರುವುದಿಲ್ಲವೋ, ಅಂತಹ ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪಾಟೀಲ್ ಸೂಚನೆ ನೀಡಿದರು.

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್

ಪರಿಷ್ಕರಣೆ ಇಲ್ಲ: ಇದೇ ವೇಳೆ ಯಾವುದೇ ಕಾರಣಕ್ಕೂ ವಾರ್ಷಿಕ ಶುಲ್ಕವನ್ನು ಪರಿಷ್ಕರಣೆ ಮಾಡುವುದಿಲ್ಲ ಎಂದು ಸಚಿವರು ಹೇಳಿದರು. ಸರ್ಕಾರಿ ಕೋಟದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿ‌ ವಾರ್ಷಿಕ ರೂ. 10,000, ಆಡಳಿತ ಮಂಡಳಿಯ ವಿದ್ಯಾರ್ಥಿ ಗೆ ರೂ. 1ಲಕ್ಷ, ಹಾಗೂ ‌ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ರೂ. 1.40 ಲಕ್ಷ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇದನ್ನು ಶೇ . 20 ರಷ್ಟು ಪರಿಷ್ಕರಣೆ ಮಾಡಬೇಕು ಎಂಬುದು ಸಂಘದ ಬೇಡಿಕೆಯಾಗಿತ್ತು. ಆದರೆ, ಇದನ್ನು ಒಪ್ಪದ ಸಚಿವರು, ಸಾಧ್ಯವಾದರೆ ಈಗಿರುವ ಶುಲ್ಕವನ್ನೇ ಕಡಿಮೆ ಮಾಡಲಾಗುವುದು. ನಾವು ಯಾವಾಗಲೂ ವಿದ್ಯಾರ್ಥಿಗಳ ಪರ ಎಂದರು.

ಶೇ. 40 ರಷ್ಟು ಸೀಟುಗಳನ್ನು ಬಿಡಿ: ಇನ್ನು ಸರ್ಕಾರಿ ಕೋಟಾದ ನರ್ಸಿಂಗ್ ಸೀಟುಗಳ ಪ್ರಮಾಣವನ್ನು ಶೇ. 40 ರಷ್ಟು ಬಿಟ್ಟುಕೊಡಿ ಎಂದು ಆಡಳಿತ ಮಂಡಳಿಯವರಿಗೆ ಸಲಹೆ ಮಾಡಿದರು. ಪ್ರಸ್ತುತ 611 ನರ್ಸಿಂಗ್ ಕಾಲೇಜು ವತಿಯಿಂದ ಒಟ್ಟು 35,000 ಸೀಟುಗಳನ್ನು ಭರ್ತಿಮಾಡಿಕೊಳ್ಳಲಾಗುತ್ತದೆ. ಶೇ. 20 ರಷ್ಟು ಸರಕಾರಿ ಹಾಗೂ ಶೇ. 80 ರಷ್ಟು ಆಡಳಿತ ಮಂಡಳಿಯವರು ಆಯ್ಕೆ ಮಾಡಿಕೊಳ್ಳುತ್ತಾರೆ. ಶೇ. 40 ರಷ್ಟು ಕೋಟಾವನ್ನು ಸರ್ಕಾರಕ್ಕೆ ಬಿಟ್ಡುಕೊಟ್ಟರೆ ಬಡ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತದೆ ಎಂದು ಪಾಟೀಲ್ ಮನವಿ ಮಾಡಿದರು.

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
ಸಾಕ್ಷ್ಯ ನಾಶದ ಆರೋಪ: ಯಾವುದೇ ತನಿಖೆಗೂ ಸಿದ್ದ- ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್!

ಇನ್ನು ನರ್ಸಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ಸೆಪ್ಟೆಂಬರ್ ತಿಂಗಳಿನಿಂದ ಆಕ್ಟೋಬರ್ ವರೆಗೂ ನಡೆಸದೆ, ಇದೇ ಶೈಕ್ಷಣಿಕ ವರ್ಷದಿಂದ ಜುಲೈ ತಿಂಗಳಲ್ಲಿ ಪ್ರವೇಶ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ಮೊಸೀನ್, ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ರಿಜಿಸ್ಟರ್ ಪಿ.ಆರ್ ಶಿವಪ್ರಸಾದ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com