ಮನೆಯವರಿಗೆ ಬುದ್ಧಿ ಕಲಿಸಲು ಸ್ನೇಹಿತರೊಂದಿಗೆ ಕಳ್ಳತನ ಮಾಡಿದ ಬಾಲಕಿ; ಹಲವು ಪ್ರಕರಣ ಬೇಧಿಸಿದ ಪೊಲೀಸರು

ಕೇವಲ ಒಂದು ವಾರದಲ್ಲಿ ಬೆಂಗಳೂರು ಪೊಲೀಸರು ಮೂವರು ಅಪ್ರಾಪ್ತರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಡೆದ ಮನೆಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಾಲಕಿ ಸೇರಿದಂತೆ ಮೂವರು ಅಪ್ರಾಪ್ತರು ಭಾಗಿಯಾಗಿರುವುದು ಪತ್ತೆಯಾಗಿದೆ. ಮನೆಯವರು ಗದರಿಸುತ್ತಿದ್ದರು ಎಂಬ ಕಾರಣಕ್ಕೆ ಬಾಲಕಿ ಅಜ್ಜಿಯ ಎಟಿಎಂ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಳು. ತನ್ನ ಕುಟುಂಬದ ಸದಸ್ಯರಿಗೆ ಪಾಠ ಕಲಿಸಲು, ಬಾಲಕಿ ಮತ್ತು ಆಕೆಯ ಇಬ್ಬರು ಸ್ನೇಹಿತರು ಕಳ್ಳತನಕ್ಕೆ ಯೋಜನೆ ರೂಪಿಸಿದ್ದರು.

80ಕ್ಕೂ ಹೆಚ್ಚು ಸಿಸಿಟಿವಿ ಕ್ಲಿಪ್‌ಗಳನ್ನು ಪರಿಶೀಲಿಸಿದ ನಂತರ ಪೊಲೀಸರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ ಮತ್ತು 25 ಲಕ್ಷಕ್ಕೂ ಹೆಚ್ಚು ಮೌಲ್ಯದ 380 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇವಲ ಒಂದು ವಾರದಲ್ಲಿ ಬೆಂಗಳೂರು ಪೊಲೀಸರು ಮೂವರು ಅಪ್ರಾಪ್ತರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ರೂ.ಗೂ ಹೆಚ್ಚು ಮೌಲ್ಯದ 785 ಗ್ರಾಂ ಚಿನ್ನಾಭರಣಗಳು ಮತ್ತು 3 ಲಕ್ಷ ರೂ.ಗೂ ಹೆಚ್ಚಿನ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 7ರಂದು ಕೋಣನಕುಂಟೆ ಪೊಲೀಸ್ ವ್ಯಾಪ್ತಿಯಲ್ಲಿ ಚಿನ್ನದ ಸರ ಕಳ್ಳತನಕ್ಕೆ ಸಂಬಂಧಿಸಿದಂತೆ 40 ವರ್ಷದ ಆಟೋ ಚಾಲಕನನ್ನು ಬಂಧಿಸಲಾಗಿತ್ತು. ಈತನನ್ನು ಚಿಕ್ಕಮಗಳೂರು ಮೂಲದ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಇಮ್ರಾನ್ ಖಾನ್ ಎಂದು ಗುರುತಿಸಲಾಗಿದೆ. ಖಾನ್ ಬಸ್ ನಿಲ್ದಾಣಗಳು ಮತ್ತು ಆಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಆತನಿಂದ 16 ಲಕ್ಷಕ್ಕೂ ಅಧಿಕ ಮೌಲ್ಯದ 235 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

ಪ್ರಾತಿನಿಧಿಕ ಚಿತ್ರ
ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕ ಬಂಧನ: 2.6 ಲಕ್ಷ ಮೌಲ್ಯದ ವಾಹನ, ಮೊಬೈಲ್ ಫೋನ್ ವಶಕ್ಕೆ

ವಯೋವೃದ್ಧರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚಿತ್ರದುರ್ಗ ಮೂಲದ ಬಾಬು (45) ಮತ್ತು ಹುಸೇನ್ (52) ಮತ್ತು ದಾವಣಗೆರೆಯ ದಾದಾಪೀರ್ (32) ಮತ್ತು ಗುಲಾಬ್ ಜಾನ್ (40) ಎಂದು ಗುರುತಿಸಲಾಗಿದೆ. ಈ ನಾಲ್ವರೂ ಕುಮಾರಸ್ವಾಮಿ ಲೇಔಟ್ ನಿವಾಸಿಗಳು.

ಜೂನ್ 4 ರಂದು ಬನಶಂಕರಿ ದೇವಸ್ಥಾನದಲ್ಲಿ ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 11 ಲಕ್ಷ ರೂಪಾಯಿ ಮೌಲ್ಯದ 174 ಗ್ರಾಂ ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ಕು ಬೈಕ್ ಕಳ್ಳತನ ಮಾಡಿದ್ದ ಕಳ್ಳನನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ಮೂರು ಬೈಕ್‌ಗಳನ್ನು ರೈಲ್ವೆ ನಿಲ್ದಾಣದಲ್ಲಿ ಮತ್ತು ಒಂದನ್ನು ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕದ್ದಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com